ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2025-06-22 20:25 IST
ಕೊಲ್ಲೂರು, ಜೂ.22: ಕೃಷಿ ಕೆಲಸಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದ ಬಾವಿಗೆ ಆಕಸ್ಮಿಕ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.22ರಂದು ಬೆಳಗ್ಗೆ ಇಡೂರು ಕುಂಜ್ಞಾಡಿ ಗ್ರಾಮದ ಗೋಳಿಕೆರೆ ಎಂಬಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಮಹಾಬಲ (48) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತೋಟದ ಕೃಷಿ ಕೆಲಸಕ್ಕೆ ಹೋಗಿದ್ದು, ಅಲ್ಲಿ ತೋಟದ ಬಾವಿಗೆ ಆಕಸ್ಮಿಕ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.