×
Ad

‘ನಡುರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನ ಬಿಡುಗಡೆ

Update: 2025-06-23 17:25 IST

ಉಡುಪಿ : ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ, ಅಮ್ಮ ಪ್ರಕಾಶನ ಕಟಪಾಡಿ, ವನಸುಮ ಟ್ರಸ್ಟ್ ಕಟಪಾಡಿ ಹಾಗೂ ವನಸುಮ ವೇದಿಕೆ ಕಟಪಾಡಿ ಆಶ್ರಯದಲ್ಲಿ ರಂಗನಟ ಹಾಗೂ ಚಲನಚಿತ್ರ ನಟ ಬಾಸುಮ ಕೊಡಗು ವಿರಚಿತ ‘ನಡುರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ರವಿವಾರ ಉಡುಪಿಯ ಮಥುರಾ ಕಂಫರ್ಟ್ ಸಭಾಂಗಣದಲ್ಲಿ ಜರಗಿತು.

ಕೃತಿಯನ್ನು ಉಡುಪಿ ತುಳುಕೂಟದ ಸ್ಥಾಪಕ, ವೈದ್ಯ ಡಾ.ಭಾಸ್ಕರಾನಂದ ಕುಮಾರ್ ಬಿಡುಗಡೆಗೊಳಿ ಸಿದರು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ. ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಉಪನ್ಯಾಸಕಿ ಡಾ.ನಿಕೇತನ ಕೃತಿ ಪರಿಚಯ ಮಾಡಿದರು.

ಉಡುಪಿ ವಿಶ್ವನಾಥ ಶೆಣೈ, ವನಸುಮ ಟ್ರಸ್ಟ್‌ನ ಕಾರ್ಯದರ್ಶಿ ವಿನಯ ಆಚಾರ್ಯ ಮುಂಡ್ಕೂರು, ಕೃತಿಕಾರ ಬಾಸುಮ ಕೊಡಗು ಉಪಸ್ಥಿತರಿದ್ದರು. ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪಲ್ಲವಿ ಕೊಡಗು ಕಾರ್ಯಕ್ರಮ ನಿರೂಪಿಸಿದರು. ಕಾವ್ಯವಾಣಿ ಕೊಡಗು ವಂದಿಸಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ಕಟಪಾಡಿಯ ಗಾನಪಲ್ಲವಿ ತಂಡದವರು ನಡುರಾತ್ರಿಯ ಸ್ವಾತಂತ್ರ್ಯ’ ಕೃತಿಯ ಕವನಗಳನ್ನು ಸುಶ್ರಾವ್ಯವಾಗಿ ಹಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News