ರಸ್ತೆ ಅಪಘಾತ: ಗಾಯಾಳು ಮೃತ್ಯು
Update: 2025-06-23 20:43 IST
ಗಂಗೊಳ್ಳಿ, ಜೂ.23: ಇಲ್ಲಿನ ಮುಳ್ಳಿಕಟ್ಟೆ ಜಂಕ್ಷನ್ ಬಳಿಯ ನಾಯಕವಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹಕ್ಲಾಡಿ ಗ್ರಾಮದ ಶೀನ(75) ಎಂದು ಗುರುತಿಸಲಾಗಿದೆ. ಜೂ.13ರಂದು ಕುಂದಾಪುರ ಕಡೆಯಿಂದ ತ್ರಾಸಿ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ಬದಿ ಬೈಕ್ ಸಮೇತರಾಗಿ ನಿಂತಿದ್ದ ಶೀನ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಜೂ.21ರಂದು ಸಂಜೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.