×
Ad

ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆಗೆ ತರಬೇತಿ

Update: 2025-06-23 21:02 IST

ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಂದ, ಕರ್ನಾಟಕ ಸರಕಾರ ಕೆ.ಇ.ಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ಹೊಸದಿಲ್ಲಿಯ ವಿಶ್ವ ವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕ.ರಾ.ಮು.ವಿ. ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಜೂನ್ 30ರ ಒಳಗೆ ಬೆಳಗ್ಗೆ 10ರಿಂದ ಸಂಜೆ 4.30ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದು ಎಂದು ಕ.ರಾ.ಮು.ವಿ ಕುಲಸಚಿವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News