ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ
Update: 2025-06-23 21:07 IST
ಉಡುಪಿ, ಜೂ.23: ಕೋಟ್ಟಾ 2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ದಳದ ವತಿಯಿಂದ ಗುರುವಾರ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಕರ್ಜೆ, ಪೇತ್ರಿ ಮೊದಲಾದ ಕಡೆ ತಂಬಾಕು ಮಾರಾಟದ ಅಂಗಡಿಗಳು, ಹೋಟೆಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಕೋಟ್ಟಾ ಕಾಯ್ದೆ ಉಲ್ಲಂಘನೆಯಾದ ಒಟ್ಟು 42 ಪ್ರಕರಣಗಳನ್ನು ದಾಖಲಿಸಿ 6,600 ರೂ. ದಂಡ ವಸೂಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ್ ಐತಾಳ್, ಕೋಟ ಸ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವನಾಥ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಬ್ರಹ್ಮಾವರ ಪೋಲೀಸ್ ಠಾಣೆಯ ಆರಕ್ಷಕರು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಛೇರಿಯ ಮಹೇಶ್ ಮತ್ತಿತರರು ಭಾಗವಹಿಸಿದ್ದರು.