×
Ad

ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

Update: 2025-06-23 21:09 IST

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ - https://sevasindhu.karnataka.gov.in/sevasindhu/DepartmentService- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News