×
Ad

ಕೊಲ್ಲೂರು ಮುಕಾಂಬಿಕಾ ದೇವಸ್ಥಾನಕ್ಕೆ ಸಚಿವ ರೆಡ್ಡಿ ಭೇಟಿ

Update: 2025-06-24 21:26 IST

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ, ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಹಾಗೂ ಆಡಳಿತ ಸಮಿತಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್, ಮುನಿಯಾಲು ಉದಯ್ ಕುಮಾರ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ರಾಜು ಪೂಜಾರಿ ಮೊದಲಾದವರಿದ್ದರು.

ಪೂರ್ಣಕುಂಭ ಸ್ವಾಗತ: ದೇಗುಲಕ್ಕೆ ಆಗಮಿಸಿದ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಪೂರ್ಣಕುಂಭ ದೊಂದಿಗೆ ಸ್ವಾಗತಿಸಲಾಯಿತು. ಹಿರಿಯ ಅರ್ಚಕರಾದ ಡಾ.ನಾರ್ಸಿ ನರಸಿಂಹ ಅಡಿಗ, ಅರ್ಚಕರಾದ ಎನ್. ಸುಬ್ರಮಣ್ಯ ಅಡಿಗ, ಸುರೇಶ್ ಭಟ್, ಸುದರ್ಶನ್ ಜೋಯಿಸ್ ಕೊಲ್ಲೂರು ಅವರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಲಾಯಿತು.

ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸಚಿವರನ್ನು ಸ್ಮರಣಿಕೆಯೊಂದಿಗೆ ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News