×
Ad

ಮಹಿಳೆ ನಾಪತ್ತೆ

Update: 2025-06-24 21:43 IST

ಉಡುಪಿ, ಜೂ.24: ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರಿನಲ್ಲಿ ವಾಸವಿದ್ದ ಮಾದೇವಿ (38) ಎಂಬ ಮಹಿಳೆ ಜೂನ್ 14 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು, ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ತೆರಳದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉತ್ತರ ಕರ್ನಾಟಕ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News