ಕನ್ನಡ ಜಾನಪದ ಪರಿಷತ್‌ನಿಂದ ಉಡುಪಿ ಡಿಸಿ ಭೇಟಿ
Update: 2025-06-25 17:11 IST
ಉಡುಪಿ, ಜೂ.25: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ, ಪ್ರದಾನ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಪ್ರಮುಖರಾದ ಜಯಕರ ಶೆಟ್ಟಿ ಇಂದ್ರಾಳಿ, ಜನಾರ್ದನ್ ಕೊಡವೂರು ಮುಂತಾದವರಿದ್ದರು. ಕಲಾವಿದ ಮಹೇಶ್ ಮರ್ಣೆ ರಚಿಸಿದ ಅಶ್ವಥ ಎಲೆಯ ಕಲಾಕೃತಿಯನ್ನು ಜಿಲ್ಲಾಧಿಕಾರಿಗೆ ನೀಡಲಾಯಿತು.