ಉಡುಪಿ ಸುಲ್ತಾನ್‌ನಿಂದ ವೈದ್ಯರ ದಿನಾಚರಣೆ: ಸಾಧಕರಿಗೆ ಸನ್ಮಾನ
ಉಡುಪಿ, ಜು.1: ನಗರದ ವಿಎಸ್‌ಟಿ ರಸ್ತೆಯ ವೆಸ್ಟ್‌ಕೋಸ್ಟ್ ಕಟ್ಟಡದಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಸಾಧಕ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂಸ್ಥೆಯ ಉಡುಪಿ ಶೋರೂಂನಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ಉಡುಪಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ, ವೈದ್ಯ ಡಾ.ಶಿಫಾ, ಭುವನೇಂದ್ರ ಪಂಚಕರ್ಮ ಆಡಳಿತ ನಿರ್ದೇಶಕ ಡಾ.ಎಂ.ಎಸ್.ಕಾಮತ್, ವೈದ್ಯೆ ಡಾ.ಮೇಘಾ ಪೈ ಅವರನ್ನು ಸನ್ಮಾನಿಸ ಲಾಯಿತು.
ಸುಲ್ತಾನ್ ಗೋಲ್ಡ್ ಉಡುಪಿ ಬ್ರಾಂಚ್ ಮೆನೇಜರ್ ಮನೋಜ್ ಎಂ.ಎಸ್., ಸೇಲ್ಸ್ ಮೇನೆಜರ್ ಅಬ್ದುಲ್ ವಾಹಿದ್ ಪಿ.ಎಂ., ಸುಲ್ತಾನ್ ಗ್ರೂಪ್ ಉಡುಪಿ ಫ್ಲೋರ್ ಮೆನೇಜರ್ ಸಿದ್ದಿಕ್ ಹಸನ್, ಮಾರ್ಕೆಟಿಂಗ್ ಮೆನೇಜರ್ ರಿಫಾ ಆಗಾ, ಸಿಬ್ಬಂದಿ ವರ್ಗ ಹಾಗೂ ಗ್ರಾಹಕರು ಉಪಸ್ಥಿತರಿದ್ದರು.
ವೈದ್ಯರ ದಿನಾಚರಣೆಯ ಪ್ರಯುಕ್ತ ವೈದ್ಯರಿಗೆ ಚಿನ್ನದ ಖರೀದಿಯ ಮೇಕಿಂಗ್ ಚಾರ್ಜ್‌ನಲ್ಲಿ ಶೇ.50ರಷ್ಟು ರಿಯಾಯಿತಿ, ಪ್ರತಿ ಡೈಮಂಡ್ ಕ್ಯಾರೆಟ್‌ನಲ್ಲಿ 10000ರೂ., ಬ್ರ್ಯಾಂಡೆಡ್ ವಾಚ್‌ಗಳ ಮೇಲೆ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.