ಎಸ್‌ಡಿಪಿಐ ಉಡುಪಿ ನಿಯೋಗದಿಂದ ಎಸ್ಪಿ ಭೇಟಿ
Update: 2025-07-01 20:21 IST
ಉಡುಪಿ, ಜು.1: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ನೇತೃತ್ವದಲ್ಲಿ ಜಿಲ್ಲಾ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಭೇಟಿಯಾಗಿ ಕುಂಜಾಲು ಪ್ರಕರಣವನ್ನು ಕಟ್ಟುನಿಟ್ಟಾಗಿ ನಿಭಾಯಿಸಿ ಆರೋಪಿ ಗಳನ್ನು ಶೀಘ್ರವಾಗಿ ಬಂಧಿಸಿದಕ್ಕೆ ಅಭಿನಂದನೆ ಸಲ್ಲಿಸಿತು.
ನಿಯೋಗದಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಂಶುದ್ದೀನ್ ಹಾಗೂ ರಝಾಕ್ ವೈ.ಎಸ್., ಜಿಲ್ಲಾ ಉಪಾಧ್ಯಕ್ಷ ನಝೀರ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಮಹಮ್ಮದ್ ಹನೀಫ್ ಹಾಗೂ ಸುಹೇಲ್ ಕಂಡ್ಲೂರ್ ಮತ್ತು ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಂ ಆದಿಉಡುಪಿ ಉಪಸ್ಥಿತರಿದ್ದರು.