ಮರವಂತೆ: ಪಿಕ್‌ಅಪ್ ವಾಹನ ಢಿಕ್ಕಿ; ಬೈಕ್ ಸವಾರ ಮೃತ್ಯು
Update: 2025-07-01 21:29 IST
ಕುಂದಾಪುರ: ಪಿಕ್‌ಅಪ್ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾಯಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಮರವಂತೆಯ ನಿವಾಸಿ ಲಕ್ಷ್ಮಣ ಪೂಜಾರಿ (48) ಎಂದು ಗುರುತಿಸಲಾಗಿದೆ. ಮರವಂತೆಯಿಂದ ಬಸ್ ನಿಲ್ದಾಣದ ಸಮೀಪ ಲಕ್ಷ್ಮಣ ಪೂಜಾರಿ ತಮ್ಮ ಬೈಕ್ ಯೂಟರ್ನ್ ಮಾಡುವಾಗ ಕುಂದಾಪುರ ಕಡೆ ಯಿಂದ ಬೈಂದೂರಿನತ್ತ ಹೋಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಲಕ್ಷ್ಮಣ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗಂಗೊಳ್ಳಿ ಪೊಲೀಸ್ ಅಪರಾಧ ವಿಭಾಗದ ಉಪನಿರೀಕ್ಷಕ ಬಸವರಾಜ್ ಕನಶೆಟ್ಟಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.