×
Ad

ಡಾ.ಗಣನಾಥ ಎಕ್ಕಾರಿಗೆ ಜೀಶಂಪ ಪ್ರಶಸ್ತಿ ಪ್ರದಾನ

Update: 2025-07-02 20:28 IST

ಉಡುಪಿ, ಜು.2: ಹಿರಿಯ ತುಳು ಜಾನಪದ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಅವರಿಗೆ ಕನ್ನಡ ಜಾನಪದ ಪರಿಷತ್ತು ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಮೊದಲ ಜಾನಪದ ಸಮ್ಮೇಳನದಲ್ಲಿ ಜೀಶಂಪ ಪರಮಶಿವಯ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಜಾನಪದ ತಜ್ಞ ಡಾ.ಸಿ.ಸೋಮಶೇಖರ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭ ಬೆಳಗಾವಿ ಬೇಲಿಮಠದ ಡಾ. ಅಲ್ಲಮ ಪ್ರಭು ಸ್ವಾಮೀಜಿ, ಪ್ರಭು ಚೆನ್ನಬಸವ ಸ್ವಾಮೀಜಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಬಂಜಾರ ಅಭಿವೃದ್ದಿ ಅಕಾಡೆಮಿ ಅಧ್ಯಕ್ಷ ಡಾ. ಗೋವಿಂದ ಸ್ವಾಮಿ, ಖ್ಯಾತ ಗಾಯಕ ಗುರುರಾಜ ಹೊಸಕೋಟೆ, ಹುಲಿಕಲ್ ನಾಗರಾಜ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಕನ್ನಡ ಜಾನಪದ ಪರಿಷತ್ತು ಅಧ್ಯಕ್ಷ ಡಾ. ಜನಪದ ಬಾಲಾಜಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News