×
Ad

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಡುಪಿ ಜಿಲ್ಲಾದ್ಯಂತ ಮಾನವ ಸರಪಳಿ

Update: 2025-07-04 15:46 IST

ಉಡುಪಿ, ಜು.4: ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ನೀಡಿರುವ ಕರೆಯಂತೆ ಉಡುಪಿ ಜಿಲ್ಲಾದ್ಯಂತ ಶುಕ್ರವಾರದ ಜುಮಾ ನಮಾಝ್ ಬಳಿಕ ಆಯಾ ಮಸೀದಿ ವ್ಯಾಪ್ತಿಯಲ್ಲಿ ಮಾನವ ಸರಪಳಿ ನಡೆಸಲಾಯಿತು.

ಉಡುಪಿ ಜಾಮಿಯ ಮಸೀದಿ ಹಾಗೂ ಸಿಟಿ ಬಸ್ ನಿಲ್ದಾಣದ ಅಂಜುಮನ್ ಮಸೀದಿಯ ವತಿಯಿಂದ ನಗರದ ಪ್ರಮುಖ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರದ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಲಾಯಿತು. ಇದೇ ಸಂದರ್ಭದಲ್ಲಿ ಫಲಕಗಳನ್ನು ಪ್ರದರ್ಶಿಸಿ ಕೂಡಲೇ ವಕ್ಫ್ ತಿದ್ದುಪಡಿ ಕಾಯ್ದೆ ಕೈಬಿಡುವಂತೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್, ಜಾಮಿಯ ಮಸೀದಿಯ ಅಧ್ಯಕ್ಷ ರಿಯಾಝ್ ಅಹ್ಮದ್, ಕಾರ್ಯದರ್ಶಿ ಖಾಲಿದ್, ಮೌಲಾನ ಅಬ್ದುರ್ರಶೀದ್ ಉಮ್ರಿ, ಎಸ್ಡಿಪಿಐ ಮುಖಂಡರಾದ ಶಾಹಿದ್ ಅಲಿ ಮೊದಲಾದವರು ಉಪಸ್ಥಿತರಿದ್ದರು.

ಅದೇ ರೀತಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬ್ರಹ್ಮಗಿರಿ ನಾಯರ್ ಕೆರೆ ಹಾಶಿಮಿ ಮಸೀದಿ, ಕೊಳಂಬೆ ಮದೀನ, ನೇಜಾರು, ಹೂಡೆ ಸೇರಿದಂತೆ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಜುಮಾ ನಮಾಝ್ ಬಳಿಕ ಹೊರಗೆ ರಸ್ತೆಯಲ್ಲಿ ಮಾನವ ಸರಳಪಳಿ ರಚಿಸಲಾಯಿತು. ಇದೇ ಸಂದರ್ಭ ಮತಪತ್ರಗಳನ್ನು ಪ್ರದರ್ಶಿಸಲಾಯಿತು.


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News