ಗದ್ದೆಯ ಕೆಸರು ನೀರಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2025-07-04 21:36 IST
ಕುಂದಾಪುರ, ಜು.4: ಗದ್ದೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕೆಸರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.3ರಂದು ಮಧ್ಯಾಹ್ನ ಹೆಸ್ಕತ್ತೂರು ಎಂಬಲ್ಲಿ ನಡೆದಿದೆ.
ಮೃತರನ್ನು ಶ್ರೀನಿವಾಸ(55) ಎಂದು ಗುರುತಿಸಲಾಗಿದೆ. ಇವರು ಗದ್ದೆ ಕೆಲಸ ಮುಗಿಸಿ ಮನೆಗೆ ಊಟಕ್ಕೆ ಗದ್ದೆಯ ಅಂಚಿನಲ್ಲಿ ನಡೆದುಕೊಂಡು ಬರುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರು. ಇದರಿಂದ ಅವರು ಗದ್ದೆಯ ಕೆಸರು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.