×
Ad

ಕುತ್ಯಾರ್‌: ಕಮಲ ಕೃಷಿ ಕೂಟ

Update: 2025-07-06 18:51 IST

ಶಿರ್ವ, ಜು.೬: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಮಲ ಕೃಷಿ ಕೂಟವನ್ನು ಶಿರ್ವ ಸಮೀಪದ ಕುತ್ಯಾರು ಗುತ್ತುಬೈಲುವಿನಲ್ಲಿ ರವಿವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಗದ್ದೆಗೆ ಹಾಲು ಎರೆಯುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೃಷಿಯನ್ನು ನಂಬಿದವರಿಗೆ ಎಂದೂ ಬರಗಾಲ ಬರುವು ದಿಲ್ಲ. ಇಂದಿನ ದಿನಗಳಲ್ಲಿ ಭತ್ತದ ಕೃಷಿ ಮಾಡುವವರ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ. ಯುವ ಪೀಳಿಗೆಗೆ ನಮ್ಮ ಹಿರಿಯರ ಕೃಷಿ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ನಾಟಿ ಕಾರ್ಯಕರ್ತರಾದ ಗುಲಾಬಿ ಪೂಜಾರಿ, ಸುನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿ ಹಿರಿಯ ಪ್ರಗತಿಪರ ಕೃಷಿಕರಾದ ಪೂವಣಿ ಪೂಜಾರಿ, ಕುಟ್ಟಿ ಪೂಜಾರಿ ಮಂಡ್ಜ, ಕರಿಯ ಶೆಟ್ಟಿ ತೋಟದಮನೆ ಅವರನ್ನು ಸನ್ಮಾನಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಶ್ರೀಕಾಂತ್ ನಾಯಕ್ ಅಲೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ರೇಶ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಬಳ್ಕೂರು ಸದಾನಂದ ವಂದಿಸಿದರು.

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್, ಉಪಾಧ್ಯಕ್ಷೆ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾ ಗುರುರಾಜ್, ಸುರೇಶ್ ಶೆಟ್ಟಿ ಕಾಡೂರು, ಸ್ಥಳೀಯರಾದ ವೇದಮೂರ್ತಿ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಕುತ್ಯಾರು ಅರಮನೆಯ ಜಿನೇಶ್ ಬಲ್ಲಾಳ್, ಜಗದೀಶ್ ಅರಸ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News