×
Ad

ವಿದ್ಯಾರ್ಥಿ ಆತ್ಮಹತ್ಯೆ

Update: 2025-07-06 19:20 IST

ಮಣಿಪಾಲ, ಜು.6: ಮೂರ್ಛೆರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿ ಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ಎಂಬಲ್ಲಿ ಜು.5ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಬಾಗಲಕೋಟೆ ಮೂಲದ ಮಲ್ಲಮ್ಮ ಗುರುಪ್ಪ ಎಂಬವರ ಮಗ ಸಾಯಿಗಣೇಶ(15) ಎಂದು ಗುರುತಿಸಲಾಗಿದೆ. ಇವರು 10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಈತ ಸುಮಾರು 4 ವರ್ಷಗಳಿಂದ ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದರು. ಈ ಖಾಯಿಲೆಯಿಂದ ವಿದ್ಯಾಬ್ಯಾಸಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಬೇಸರಗೊಂಡ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News