×
Ad

ಐಟಿಐ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶ: ಮನೋಹರ್ ಕಾಮತ್

Update: 2025-07-07 17:03 IST

ಕುಂದಾಪುರ, ಜು.7: ಎಸ್‌ಎಸ್‌ಎಲ್‌ಸಿ ಶಿಕ್ಷಣದ ನಂತರ ಕನಿಷ್ಠ ಅವಧಿಯಲ್ಲಿ ಹಾಗೂ ಕಡಿಮೆ ವೆಚ್ಚದಲ್ಲಿ ತಾಂತ್ರಿಕ ಶಿಕ್ಷಣ ಪಡೆದುಕೊಳ್ಳುವ ಐಟಿಐ ವಿದ್ಯಾರ್ಥಿಗಳಿಗೆ ಬೇರೆ ಶಿಕ್ಷಣ ಪದವಿ ಪಡೆದುಕೊಳ್ಳುವರಿಗಿಂತ ಹೆಚ್ಚಿನ ಉದ್ಯೋಗಾವಕಾಶಗಳು ದೊರಕುತ್ತಿದೆ ಎಂದು ನಾಡಾ ಐಟಿಐ ಕಾಲೇಜಿನ ಪ್ರಾಂಶುಪಾಲ ಮನೋಹರ್ ಆರ್ ಕಾಮತ್ ಅಭಿಪ್ರಾಯಪಟ್ಟರು.

ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಐಟಿಐ ಕಾಲೇಜಿನಲ್ಲಿ ಸೋಮವಾರ ಬೆಂಗಳೂರಿನ ಅಧ್ವೈತ್ ಮೋಟಾರ್ಸ್ ಸಂಸ್ಥೆಯಿಂದ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಅವರು ಮಾತನಾಡುತಿದ್ದರು.

ಕೇಂದ್ರ ಸರಕಾರದ ಆತ್ಮನಿರ್ಭರ ಹಾಗೂ ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಗೆ ಸಿಗುವ ಪ್ರೋತ್ಸಾಹ ದಿಂದ ಇತ್ತೀಚಿನ ವರ್ಷಗಳಲ್ಲಿ ಐಟಿಐ ಶಿಕ್ಷಣ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉತ್ತಮ ವೇತನ ಹಾಗೂ ಸೌಲಭ್ಯಗಳೊಂದಿಗೆ ಉದ್ಯೋಗ ಭದ್ರತೆಯೂ ದೊರಕುತ್ತಿದೆ. ಕಳೆದ ಒಂದು ತಿಂಗಳ ಅಂತರ ದಲ್ಲಿ ಬೆಂಗಳೂರಿನ ಅಟ್ಲಾಂಟ್, ಉಡುಪಿಯ ಆಭರಣ, ಮಂಗಳೂರಿನ ಮೆಡಿಟೆಕ್, ಅರವಿಂದ್ ಮೋಟಾರ್ಸ್ ಸೇರಿದಂತೆ ಹತ್ತು ಹಲವು ಕಂಪೆನಿಗಳು ಸಂಸ್ಥೆಗೆ ಕ್ಯಾಂಪಸ್ ಸಂದರ್ಶನಕ್ಕಾಗಿ ಬರುತ್ತಿದ್ದು, ಇನ್ನೂ ಹಲವು ಕಂಪೆನಿಗಳಿಂದ ಬೇಡಿಕೆ ಇದ್ದು, ದೇಶದ ಕೈಗಾರಿಕಾ ಬೆಳವಣಿಗೆಯಲ್ಲಿ ಇದೊಂದು ಉತ್ತಮ ಮೈಲುಗಲ್ಲು ಎಂದು ಹೇಳಿದರು.

ಬೆಂಗಳೂರಿನ ಅಧ್ವೈತ್ ಮೋಟಾರ್ಸ್ ಸಂಸ್ಥೆಯ ಎಚ್‌ಆರ್ ಪೂರ್ಣಿಮಾ, ಸೇವಾ ವ್ಯವಸ್ಥಾಪಕ ಶರತ್‌ಕುಮಾರ, ರೇ.ಫಾ.ರಾಬರ್ಟ್ ಜ್ಹಡ್ ಎಂ ಡಿಸೋಜ ಸ್ಮಾರಕ ಸೊಸೈಟಿಯ ಕಾರ್ಯದರ್ಶಿ ನವೀನ್ ಲೋಬೊ, ಪ್ಲೆಸ್ಮೆಂಟ್ ಅಧಿಕಾರಿ ರಾಜೇಶ್ ಕೆ.ಸಿ., ಕಿರಿಯ ತರಬೇತಿ ಅಧಿಕಾರಿಗಳಾದ ರಾಘವೇಂದ್ರ ಆಚಾರ್, ಯೋಗೀಶ್ ಬಂಕೇಶ್ವರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News