×
Ad

ವಿಶೇಷ ಮಕ್ಕಳಿಗೆ ಡಿ.ಎಡ್ ತರಬೇತಿ: ಅರ್ಜಿ ಆಹ್ವಾನ

Update: 2025-07-07 20:30 IST

ಉಡುಪಿ: ರಾಜ್ಯ ಸರಕಾರದ ವತಿಯಿಂದ ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 50 (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿ ಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಂದ - https://nber-rehabcouncil.gov.in- ವೆಬ್‌ಸೈಟ್‌ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ತರಬೇತಿ ಕಾರ್ಯಕ್ರಮಗಳು: ಹೆಲೆನ್ ಕೆಲ್ಲರ್ ಗವರ್ನಮೆಂಟ್ ಟೀಚರ್ಸ್‌ ಟ್ರೈನಿಂಗ್ ಸೆಂಟರ್ ಫಾರ್ ವಿಷ್ಯುವಲಿ ಹ್ಯಾಂಡಿಕ್ಯಾಪ್ಡ್‌ನಲ್ಲಿ ದೃಷ್ಟಿದೋಷವುಳ್ಳವರಿಗೆ ಹಾಗೂ ಗವರ್ನಮೆಂಟ್ ಟೀಚರ್ಸ್‌ ಚ್ರೈನಿಂಗ್ ಸೆಂಟರ್ ಫಾರ್ ಹಿಯರಿಂಗ್ ಹ್ಯಾಂಡಿಕ್ಯಾಪ್ಡ್ ಸಂಸ್ಥೆಯಲ್ಲಿ ಶ್ರವಣದೋಷವುಳ್ಳವರಿಗೆ ತರಬೇತಿ ನೀಡಲಾಗುತ್ತದೆ.

ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ (ತರಬೇತಿ) ಕಚೇರಿ, ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ, ಪುಲಿಕೇಶಿ ರಸ್ತೆ, ತಿಲಕ್‌ನಗರ, ಮೈಸೂರು, ದೂರವಾಣಿ ಸಂಖ್ಯೆ : 0821- 2491600, ತರಬೇತಿ ಸಂಯೋಜಕಿ ಆಶಾ ವಿ.ಹಿರೇಮಠ್ ಮೊ.ನಂ: 9113561620 ಹಾಗೂ ಟಿ.ಡಿ. ಮಂಜುನಾಥ ಮೊ.ನಂ: 9686762378 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News