×
Ad

ಅರ್ಜಿ ಆಹ್ವಾನ

Update: 2025-07-07 20:33 IST

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ದೂರ ಶಿಕ್ಷಣದ ಮುಖಾಂತರ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ, ಸರ್ಟಿಫಿಕೆಟ್ ಹಾಗೂ ಡಿಪ್ಲೋಮಾ ಶಿಕ್ಷಣ ಕ್ರಮಗಳಲ್ಲಿ ವ್ಯಾಸಂಗ ಮಾಡಬಯಸುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ವಿದ್ಯಾರ್ಥಿಗಳಿಂದ ನೇರವಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ - http://minority.ksouportal.com- ಅಥವಾ - https://dom.karnataka.gov.in- ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ - https://domkarnataka.gov.in- ಅಥವಾ ಸಹಾಯವಾಣಿ 9900667916, 9945366062, 9113512565, 96113512565, 9611418726, 9900506659, 9035395137, 8123469017, 9844000407 ಹಾಗೂ 8277799990 ಅಥವಾ ಜಿಲ್ಲಾ ಕಛೇರಿ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News