×
Ad

ದನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2025-07-13 21:11 IST

ಬೈಂದೂರು, ಜು.13: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ದನ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಾಸ್ತಾನದ ಮೊಹಮ್ಮದ ಕೈಫ್ ಮತ್ತು ಕಾಪು ಉಚ್ಚಿಲದ ಸುಹೇಲ್ ಖಾದರ್ ಬಂಧಿತ ಆರೋಪಿಗಳು. ಬಂಧಿತರಿಂದ ದನವನ್ನು ಕಳವು ಮಾಡಿ ಸಾಗಾಟ ಮಾಡಿದ ಮೂರು ಕಾರುಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಅಲ್ಲದೇ 4 ದನಗಳನ್ನು ರಕ್ಷಿಸಿ ಗೋಶಾಲೆಗೆ ಸೇರಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪದೇ ಪದೇ ದನ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಸ್ಪಿ ಹರಿರಾಂ ಶಂಕರ್ ಬೈಂದೂರು ವೃತ್ತ ನಿರೀಕ್ಷಕ ಸವೀತ್ರತೇಜ್ ನೇತೃತ್ವದಲ್ಲಿ ದನ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮತ್ತು ಪತ್ತೆಗೆ 3 ತಂಡಗಳನ್ನು ರಚಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News