×
Ad

ಆಕ್ಸಿಜನ್ ಪ್ರಮಾಣ ಹೆಚ್ಚಿಸಲು ಹಸಿರು ಜೀವ ಅತಿ ಅವಶ್ಯಕ: ಡಾ.ವಿಜಯ ಮಂಜರ್

Update: 2025-07-14 18:43 IST

ಕೋಟ, ಜು.14: ಪರಿಸರದಲ್ಲಿ ಆಕ್ಸಿಜನ್ ಪ್ರಮಾಣ ಹೆಚ್ಚಿಸಬೇಕು ಅದಕ್ಕಾಗಿ ಈಗಿಂದಿಗಲೇ ಗಿಡ ನಡುವ ಕಾಯಕಕ್ಕೆ ವೇಗ ನೀಡಬೇಕು ಎಂದು ಪಾಂಡೇಶ್ವರದ ಯೋಗ ಗುರುಕುಲದ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಕರೆ ನೀಡಿದರು.

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯೋಜನೆಯಲ್ಲಿ ಕೋಟದ ಪಂಚ ವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ ಪ್ರೈಸ್ ಬ್ರಹ್ಮಾವರ ಇವರ ಸಹಭಾಗಿತ್ವ ದಡಿ 263ನೇ ರವಿವಾರ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಚಲನಚಿತ್ರನಟ ಎಸ್.ದೊಡ್ಡಣ್ಣ ಆನ್‌ಲೈನ್ ಮೂಲಕ ಪ್ರಕೃತಿ ಸಂದೇಶ ನೀಡಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು.

ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶಾಂತಾ ಭಟ್, ಉಪಾಧ್ಯಕ್ಷೆ ಜೂಡಿತ್ ಪಿಕಾರ್ಡೊ, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಮಾಜಿ ಅಧ್ಯಕ್ಷ ಅರವಿಂದ ಶರ್ಮ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಸಿಇಒ ಶ್ಯಾಮಲ ಪಾಂಡೇಶ್ವರ, ಸಹಾಯಕಿ ಸುಜಾತ ವೆಂಕಟೇಶ ಉಪಸ್ಥಿತರಿದ್ದರು.

ಪಂಚವರ್ಣದ ಮಹೇಶ್ ಬೆಳಗಾವಿ ಸ್ವಾಗತಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News