ಉಡುಪಿ : ರಾಜ್ಯ ಸರಕಾರದ ಸಾಧನೆಗಳ ಪ್ರದರ್ಶನ ಉದ್ಘಾಟನೆ
Update: 2025-07-14 20:06 IST
ಉಡುಪಿ, ಜು.14: ರಾಜ್ಯ ಸರಕಾರದ ಕಳೆದ ಎರಡು ವರ್ಷಗಳ ಸಾಧನೆ ಯನ್ನು ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ನಗರದ ಬನ್ನಂಜೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿವಿಧ ಇಲಾಖೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಗಳನ್ನು ಒಳಗೊಂಡ ಈ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಪಾಧ್ಯಕ್ಷೆ ಗೀತಾ ವಾಗ್ಳೆ, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕೆಎಸ್ಸಾರ್ಟಿಸಿ ಅಧಿಕಾರಿಗಳು, ರೆಡ್‌ಕ್ರಾಸ್ ಕಾರ್ಯದರ್ಶಿ ಗಣನಾಥ ಎಕ್ಕಾರು ಹಾಗೂ ಇತರರು ಉಪಸ್ಥಿತರಿದ್ದರು.