×
Ad

ಬಾಲಕಿಯರ ಕಾಲೇಜು ವಿದ್ಯಾರ್ಥಿಗಳಿಗೆ ಅನ್ನ ಸಂತರ್ಪಣೆಗೆ ಚಾಲನೆ

Update: 2025-07-16 22:03 IST

ಉಡುಪಿ, ಜು.16: ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಅನ್ನಸಂತರ್ಪಣೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ನಗರದ ಕೇಂದ್ರ ಭಾಗದಲ್ಲಿರುವ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 500 ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿದ್ದು ಮಧ್ಯಾಹ್ನ ಊಟದ ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆ ಎದುರಿಸುತ್ತಿರುವುದನ್ನು ಮನಗಂಡು ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಶಾಲಾ ಉಪನ್ಯಾಸಕರು ಈ ಬಗ್ಗೆ ಗಮನಕ್ಕೆ ತಂದಿದ್ದರು ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ, ಶ್ರೀಕೃಷ್ಣ ಮುಖ್ಯಪ್ರಾಣ ಅನ್ನಪ್ರಸಾದ ಸಮಿತಿಯ ಅಧ್ಯಕ್ಷ ಶೇಖರ ಕೋಟ್ಯಾನ್, ನಿವೃತ್ತ ಪ್ರಾಂಶುಪಾಲೆ ತಾರಾದೇವಿ ಎಚ್., ಪ್ರಮುಖರಾದ ಯೋಗೀಶ್ ಕೋಟ್ಯಾನ್, ಶಿಕ್ಷಣ ಸೇವಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜು ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News