ಕಾರ್ಕಳ: ಪತ್ನಿಗೆ ಕತ್ತಿಯಿಂದ ಕಡಿದು ಆತ್ಮಹತ್ಯೆ ಮಾಡಿಕೊಂಡ ಪತಿ
Update: 2025-07-16 22:28 IST
ಕಾರ್ಕಳ, ಜು.16: ಪತ್ನಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಪತಿ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.15ರಂದು ಮಧ್ಯಾಹ್ನ ವೇಳೆ ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟು ನಡಿಮತ್ತಾವು ಎಂಬಲ್ಲಿ ನಡೆದಿದೆ.
ಮೃತರನ್ನು ಹಿರ್ಗಾನ ನಡಿಮತ್ತಾವು ನಿವಾಸಿ ಗೋಪಾಲಕೃಷ್ಣ(60) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ ಸುರೇಖಾ(44) ಎಂಬವರಿಗೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದರು. ಆಕೆಯ ಮೈಯಿಂದ ರಕ್ತಬರುವುದನ್ನು ನೋಡಿ ಹೆದರಿದ ಗೋಪಾಲಕೃಷ್ಣ ಮನೆಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.