×
Ad

ರೆಡ್‌ಕ್ರಾಸ್‌ನಿಂದ ಉಚಿತ ಔಷಧಿ ವಿತರಣೆ

Update: 2025-07-21 20:40 IST

ಉಡುಪಿ, ಜು.21: ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕದ ಶಿಪಾರಸ್ಸಿನಂತೆ ಕುಂದಾಪುರ ರೆಡ್‌ಕ್ರಾಸ್ ಘಟಕವು 25ಸಾವಿರ ರೂ.ಗಳ ಔಷಧಿಗಳನ್ನು ಬಡ ರೋಗಿಗಳಿಗೆ ವಿತರಣೆ ಮಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.

ಭಾರತೀಯ ಕುಟುಂಬ ಕಲ್ಯಾಣ ಕೇಂದ್ರದ ಅವಿಭಾಜಿತ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಅವರಿಗೆ ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ರೆಡ್‌ಕ್ರಾಸ್ ಭವನದಲ್ಲಿ ಹಸ್ತಾಂತರಿಸಿದರು. ಉಡುಪಿ ಜಿಲ್ಲಾ ರೆಡ್‌ಕ್ರಾಸ್ ವತಿಯಿಂದ ಫಲಾನುಭವಿಗಳಿಗೆ ವಿತರಿಸುವುದಕ್ಕಾಗಿ ಸೊಳ್ಳೆ ಪರದೆ ಕಾಯಿಲ್ ಮತ್ತು ಟರ್ಪಲಿನ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ರೆಡ್‌ಕ್ರಾಸ್ ಖಜಾಂಚಿ ರಮಾದೇವಿ, ತಾಲೂಕು ರೆಡ್‌ಕ್ರಾಸ್ ಖಚಾಂಚಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರದ ವೈದ್ಯಾಧಿಕಾರಿ ಡಾ.ಮೇಘ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News