ಉಡುಪಿ: ವ್ಯಸನ ಮುಕ್ತ ದಿನಾಚರಣೆ
ಉಡುಪಿ, ಜು.29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಉಡುಪಿ ಕರಾವಳಿ, ವಿದ್ಯಾರತ್ನ ನರ್ಸಿಂಗ್ ಕಾಲೇಜು ಉಡುಪಿ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಆಗಸ್ಟ್ 01ರಂದು ಬೆಳಗ್ಗೆ 10:30ಕ್ಕೆ ಅಜ್ಜರಕಾಡಿನ ಐಎಂಎ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿ ದ್ದಾರೆ.ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಸಿಟಿ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಡಾ.ವಿಶ್ವನಾಥ್ ಶಾನುಭಾಗ್, ಮೂಳೆ ರೋಗ ತಜ್ಞ ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಉಡುಪಿ ಕರಾವಳಿ ಅಧ್ಯಕ್ಷ ಡಾ.ಕೆ ಸುರೇಶ್ ಶೆಣೈ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಮತ್ತಿತರರು ಭಾಗವಹಿಸಲಿದ್ದಾರೆ.