ಉಡುಪಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಗೆ ಅಭಿನಂದನೆ
Update: 2025-08-01 19:43 IST
ಉಡುಪಿ: ಉಡುಪಿ ಜಿಲ್ಲೆಯ ನೂತನ ಆಡಳಿತಾತ್ಮಕ ನ್ಯಾಯ ಮೂರ್ತಿಗಳಾಗಿ ಇತ್ತೀಚೆಗೆ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರನ್ನು ಉಡುಪಿ ವಕೀಲರ ಸಂಘದ ನಿಯೋಗವು ಇಂದು ಭೇಟಿಯಾಗಿ ಅಭಿನಂದಿಸಿತು.
ಆದಷ್ಟು ಶೀಘ್ರ ಉಡುಪಿ ವಕೀಲರ ಸಂಘಕ್ಕೆ ಭೇಟಿ ನೀಡುವಂತೆ ಅವರನ್ನು ಸಂಘ ಆಹ್ವಾನಿಸಿತು. ನಿಯೋಗ ದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಖಜಾಂಚಿ ಗಂಗಾಧರ ಎಚ್.ಎಂ., ಹಿರಿಯ ನ್ಯಾಯವಾದಿ ಜಯಕೃಷ್ಣ ಆಳ್ವ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಪ್ರಜ್ವಲ್ ಶೆಟ್ಟಿ ಉಪಸ್ಥಿತರಿದ್ದರು.