×
Ad

ರಸ್ತೆ ದುರಸ್ತಿಗೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್‌ನಿಂದ ಡಿಸಿಗೆ ಮನವಿ

Update: 2025-08-01 19:45 IST

ಉಡುಪಿ, ಆ.1: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯ ಲ್ಲಿರುವ ಉಡುಪಿ ಕರಾವಳಿ ಜಂಕ್ಷನ್‌ನಿಂದ ಮಲ್ಪೆ ತನಕದ ರಾಷ್ಟ್ರೀಯ ಹೆದ್ದಾರಿ ಹಾಗೂ ಉಡುಪಿ ನಗರ ಭಾಗದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ ವಾಹನ ಸಂಚಾರ ಸುಗಮಗೊಳಿಸುವಂತೆ ಉಡುಪಿ ಜಿಲ್ಲಾಧಿಕಾರಿ ಇತ್ತೀಚೆಗೆ ಮನವಿ ಸಲ್ಲಿಸಲಾಯಿತು.

ನಿಯೋಗವು ಇದೇ ಸಂದರ್ಭದಲ್ಲಿ ಉಡುಪಿಯ ಹಲವಾರು ಪ್ರಮುಖ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಕೂಡ ವಿನಂತಿಸಲಾಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ಗಣೇಶ್ ನೆರ್ಗಿ, ಚಂದ್ರಮೋಹನ್, ಸತೀಶ್ ಕೊಡವೂರು, ಸತೀಶ್ ಕುಮಾರ್ ಮಂಚಿ, ಕೃಷ್ಣ ಹೆಬ್ಬಾರ್, ನಂದ ಕಿಶೋರ್, ಭರತ್ ಕುಮಾರ್, ಗಿರೀಶ್ ಪೂಜಾರಿ, ಚಿತ್ತರಂಜನ್ ಹೆರ್ಗ,ಜೊಸ್ಸಿ ಪಿಂಟೊ, ಮಮತಾ ಶೆಟ್ಟಿ, ಚಂದ್ರಿಕಾ ಶೆಟ್ಟಿ, ಸಂಧ್ಯಾ ತಿಲಕ್ ರಾಜ್, ಪ್ರಮೀಳಾ ಸುವರ್ಣ, ಸುಂದರಿ ಪುತ್ತೂರು, ಅರ್ಚನಾ ದೇವಾಡಿಗ, ಸುಪ್ರೀತಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News