ದನ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ
Update: 2025-08-01 20:43 IST
ಕುಂದಾಪುರ, ಆ.1: ಕಾಳಾವರ ಜಂಕ್ಷನ್‌ನಲ್ಲಿ ಮೂರು ದಿನಗಳ ಹಿಂದೆ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು ಕುಂದಾಪುರ ಪೊಲೀಸರು ಆ.1ರಂದು ಬಂಧಿಸಿದ್ದಾರೆ.
ಗುಲ್ವಾಡಿಯ ಅಬೂಬಕರ್(39), ಮಹಮ್ಮದ್ ರಫೀಕ್(36), ಯಾಕೂಬ್(24), ತಲ್ಲೂರು ಕೋಟೆ ಬಾಗಿಲಿನ ಸುನಿಲ್(33) ಬಂಧಿತ ಆರೋಪಿಗಳು. ಇವರಿಂದ ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 5,00,000ರೂ. ಎಂದು ಅಂದಾಜಿಸಲಾಗಿದೆ. ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.