ಕ್ರೈಸ್ತ ಭಗಿನಿಯರ ಬಂಧನ: ವಿನಯ್ ಕುಮಾರ್ ಸೊರಕೆ ಖಂಡನೆ
Update: 2025-08-01 21:01 IST
ಉಡುಪಿ, ಆ.1: ಛತ್ತೀಸ್ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರಕಾರದ ಕ್ರಮವನ್ನು ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹಾಗೂ ಧಾರ್ಮಿಕ ಸಂಸ್ಥೆಗಳ ವಿರುದ್ಧದ ದಾಳಿಗಳು ಗಂಭೀರವಾಗಿ ಹೆಚ್ಚುತ್ತಿವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯೊಂದಿಗೆ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ, ಈ ಪ್ರಕರಣವನ್ನು ತಕ್ಷಣ ಗಮನಿಸಿ, ಇಬ್ಬರು ಭಗಿನಿಯರ ಬಿಡುಗಡೆಗೆ ಕ್ರಮ ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.