ವಿದ್ಯಾರ್ಥಿವೇತನ, ಸಮವಸ್ತ್ರ, ಅಶಕ್ತರಿಗೆ ಸಹಾಯಧನ ವಿತರಣೆ
ಕುಂದಾಪುರ, ಆ.3: ವಕ್ವಾಡಿ ಆಸರೆ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಶಕ್ತರಿಗೆ ಸಹಾಯಧನ, ವಕ್ವಾಡಿಯ 3 ಅಂಗನವಾಡಿ ಕೇಂದ್ರಕ್ಕೆ ಮತ್ತು ಹೈಸ್ಕೂಲ್ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ರವಿವಾರ ವಕ್ವಾಡಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ತಮ್ಮ ಸಂಪಾದನೆಯಲ್ಲಿ ಒಂದಿಷ್ಟು ಹಣವನ್ನು ಸಮಾಜ ಮುಖಿ ದಾನ ಧರ್ಮ ಹಾಗೂ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಯಾವುದೇ ಪ್ರತಿಫಲಾಕ್ಷೆಯಿಲ್ಲದೆ ವಕ್ವಾಡಿಯ ಆಸರೆ ಟ್ರಸ್ಟ್ ಕಾರ್ಯ ಚರಿಸುತ್ತಿರುವುದು ಶ್ಲಾಘನೀಯ ವಿಚಾರವಗಿದ್ದು ಈ ಕಾರ್ಯ ಯುವ ಜನಾಂಗಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಆಸರೆ ಟ್ರಸ್ಟ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್‌ಮನೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ರಮೇಶ್ ಶೆಟ್ಟಿ, ರೋಟೇರಿಯನ್ ವಿಜಯ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾ ಯಿತು.
ರಾಜಕೀಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ನಾವುಂದ ಹೈಸ್ಕೂಲ್ ಪ್ರಾಧ್ಯಾಪಕ ಬಿ.ಕೆ.ಕೃಷ್ಣಮೂರ್ತಿ, ಕಾಳವಾರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್ ಉಪಸ್ಥಿತರಿದ್ದರು.
ಕೀರ್ತಿ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಯಮಿ ಗಜೇಂದ್ರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಪೂಜಾರಿ ವಕ್ವಾಡಿ ನಿರ್ವಹಿಸಿ, ಆನಂದ್ ಆಚಾರ್ಯ ವಂದಿಸಿದರು.