×
Ad

ಬಸ್ ಢಿಕ್ಕಿ: ಸ್ಕೂಟರ್ ಸಹಸವಾರೆ ಪತ್ನಿ ಮೃತ್ಯು, ಪತಿ ಗಂಭೀರ

Update: 2025-08-03 20:28 IST

ಕುಂದಾಪುರ, ಆ.3: ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಹೊಸಮಠ ಚಾರುಕೊಟ್ಟಿಗೆ ನಿವಾಸಿ ಜಲಜಾ(64) ಎಂದು ಗುರುತಿಸಲಾಗಿದೆ. ಇವರ ಪತಿ ಸ್ಕೂಟರ್ ಸವಾರ ನಾರಾಯಣ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಆನಗಳ್ಳಿಯಿಂದ ಚಾರುಕೊಟ್ಟಿಗೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದು, ಆಗ ಹಿಂದಿನಿಂದ ಬಂದ ಬಸ್, ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ನಾರಾಯಣ ಹಾಗೂ ಜಲಜಾ ಇಬ್ಬರೂ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಜಲಜಾ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News