ವಿಷದ ಹಾವು ಕಚ್ಚಿ ಬಾಲಕಿ ಮೃತ್ಯು
Update: 2025-08-04 21:15 IST
ಅಮಾಸೆಬೈಲು: ವಿಷದ ಹಾವು ಕಚ್ಚಿದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಆ.3ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಹೆಬ್ರಿ ಶೇಡಿಮನೆ ಗ್ರಾಮದ ಶ್ರೀಧರ ಎಂಬವರ ಮಗಳು ಸನ್ನಿಧಿ (8) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇದ್ದ ಕಾರಣ ತಂದೆಯ ಜೊತೆ ತೋಟದಲ್ಲಿದ್ದ ಸನ್ನಿಧಿಗೆ ವಿಷಕಾರಿ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಆಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.