×
Ad

ರಾ.ಹೆ. 169ಎ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ; ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

Update: 2025-11-10 21:44 IST

ಸಾಂದರ್ಭಿಕ ಚಿತ್ರ

ಉಡುಪಿ, ನ.10: ರಾಷ್ಟ್ರೀಯ ಹೆದ್ದಾರಿ-169ಎಯಲ್ಲಿ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮಲ್ಪೆ ಭಾಗದ 85.200ಕಿ.ಮೀ.ನಿಂದ 85.580ಕಿ.ಮೀವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸುಗಮ ರಸ್ತೆ ಕಾಮಗಾರಿಗಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221 (ಎ)(2)(5)ರನ್ವಯ ನವೆಂಬರ್ 10ರಿಂದ 30ರವರೆಗೆ ಉಡುಪಿ- ಮಲ್ಪೆಯ ಆದಿ ಉಡುಪಿ ಭಾಗದಲ್ಲಿ ಚತುಷ್ಪಥ ರಸ್ತೆಯ ಎರಡೂ ಬದಿಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ಅವಕಾಶ ಕಲ್ಪಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ಮಲ್ಪೆಯಿಂದ ಮಂಗಳೂರು ಮತ್ತು ಕುಂದಾಪುರ ಕಡೆಗೆ ಹೋಗಲು ಭಾರೀ ವಾಹನಗಳು ಮಲ್ಪೆ-ಬಲರಾಮ ಸರ್ಕಲ್- ತೊಟ್ಟಂ- ಗುಜ್ಜರಬೆಟ್ಟು- ಹೂಡೆ- ನೇಜಾರ್- ಕಲ್ಯಾಣಪುರ ಮಾರ್ಗವಾಗಿ ಸಂತೆಕಟ್ಟೆ ತಲುಪಿ, ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಬೇಕು. ಅದೇ ರೀತಿ ಮಲ್ಪೆಗೆ ಬರುವ ಭಾರೀ ವಾಹನಗಳು ಆಶೀರ್ವಾದ್ ಸರ್ಕಲ್-ಲಕ್ಷ್ಮೀ ನಗರ- ಕೊಡವೂರು ಮೂಲಕ ಮಲ್ಪೆ ಕಡೆಗೆ ಸಂಚರಿಸಬೇಕು.

ಮಲ್ಪೆ ಕಡೆಗೆ ಹೋಗುವ ಮತ್ತು ಬರುವ ಲಘು ವಾಹನಗಳು ಕಲ್ಮಾಡಿ ಸರ್ಕಲ್ನಿಂದ ಅಂಬಲಪಾಡಿ ತಲುಪಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸಬೇಕು. ಕಲ್ಮಾಡಿಯಿಂದ-ಕಿದಿಯೂರು- ಕಡೆಕಾರು- ಕನ್ನರ್ಪಾಡಿ ರಾಷ್ಟ್ರೀಯ ಹೆದ್ದಾರಿ ಮೂಲಕ ಅಥವಾ ಉಡುಪಿ ಕಡೆಗೆ ಸಂಚರಿಸಬೇಕು.

ಮಲ್ಪೆಯಿಂದ ಮಂಗಳೂರು ಕಡೆಗೆ ಹೋಗುವ ಲಘು ವಾಹನಗಳು ಪಡುಕೆರೆ ತೊಟ್ಟಂ ಮುಖಾಂತರ ಬಲಾಯಿಪಾದೆಗೆ ಬಂದು ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News