ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ
ಉಡುಪಿ, ನ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ನ.11ರ ಮಂಗಳವಾರ ಬೆಳಗ್ಗೆ 10:15ಕ್ಕೆ ಮಣಿಪಾಲ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಣಿಪಾಲ ಪದವಿ ಪೂರ್ವ ಕಾಲೇಜು ಸಂಚಾಲಕ ಕೆ.ಪ್ರಕಾಶ್ ಶೆಟ್ಟಿ ಭಾಗವಹಿಸಲಿದ್ದಾರೆ.
ಕುಂದಾಪುರ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಚೇತನ್ ಶೆಟ್ಟಿ ಕೋವಾಡಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.