×
Ad

ಆ.29ರಂದು ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ

Update: 2023-08-27 20:54 IST

ಉಡುಪಿ, ಆ.27: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಯನ್ನು ಆ.29ರಂದು ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಂತರ ಪಾದಯಾತ್ರೆ ಮೂಲಕ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕ ಬಳಿ ತೆರಳಿ ಸಂಜೆ 4ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೋರಾಟ ಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ ಹಾಗೂ ಸೌಜನ್ಯ ಕುಟುಂಬಸ್ಥರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News