×
Ad

ನ.22ರಂದು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದಲ್ಲಿ ಪ್ರಶಸ್ತಿ ಪ್ರದಾನ

Update: 2023-11-21 20:04 IST

ಉಡುಪಿ, ನ.21: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ನಡೆದಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2023ರ ಅಂಗವಾಗಿ ಸಿಬ್ಬಂದಿ ಸೇವಾ ಪುರಸ್ಕಾರ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಓದುಗ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ ನ.22ರಂದು ಬೆಳಗ್ಗೆ 10:30ಕ್ಕೆ ನಗರದ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾ ಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮತ್ತಿತರರು ಭಾಗವಹಿಸಲಿದ್ದು, ಜೆ.ಪಿ.ರಾವ್ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News