×
Ad

ಡಾ.ಶಿವರಾಮ ಕಾರಂತ ಟ್ರಸ್ಟ್ ಆಶ್ರಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

Update: 2025-10-13 20:48 IST

ಉಡುಪಿ 3: ಉಡುಪಿ ಜಿಲ್ಲೆಯ ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಆಶ್ರಯದಲ್ಲಿ ಶ್ರೀ ಗವಿಸಿದ್ಧೇಶ್ವರ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾ ವಿದ್ಯಾಲಯ ಕೊಪ್ಪಳ ಇವರ ಸಹಯೋಗದೊಂದಿಗೆ ಡಾ.ಶಿವರಾಮ ಕಾರಂತರ ಸಾಹಿತ್ಯ ಮತ್ತು ವೈಚಾರಿಕತೆ ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಅ.17ರಂದು ಬೆಳಗ್ಗೆ 10:30ಕ್ಕೆ ಕೊಪ್ಪಳದ ಶ್ರೀಗವಿಸಿದ್ಧೇಶ್ವರ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ವಿಚಾರ ಸಂಕಿರಣದಲ್ಲಿ ನಾಡಿನ ಗಣ್ಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದೆ.

ಭಾಗವಹಿಸಲು ಇಚ್ಛಿಸುವವರು ಡಾ.ನಾಗರಾಜ ದಂಡೋತಿ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರ ದೂ.ಸಂಖ್ಯೆ:9740479127ಅನ್ನು ಸಂಪರ್ಕಿಸಬಹುದು ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News