ಆನ್‌ಲೈನ್ ಹೂಡಿಕೆ| 19.59 ಲಕ್ಷ ರೂ. ವಂಚನೆ; ಪ್ರಕರಣ ದಾಖಲು

Update: 2026-08-15 21:10 IST

ಉಡುಪಿ, ಆ.15: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ (35) ಎಂಬವರು 2024ರ ಅಗಸ್ಟ್ ತಿಂಗಳಿನಲ್ಲಿ ಹೆಚ್ಚಿನ ಲಾಭ ಸಿಗುವುದಾಗಿ ನಂಬಿ ಆನ್‌ಲೈನ್ ಹೂಡಿಕೆ ಮಾಡಿದ್ದು, ಇವರು 2024ರ ಸೆ.5ರಿಂದ 2025ರ ಫೆ.8ರವರೆಗೆ ಒಟ್ಟು 19,59,320ರೂ. ಹಣವನ್ನು ಆರೋಪಿಗಳು ಸೂಚಿಸಿದ ಖಾತೆಗೆ ವರ್ಗಾವಣೆ ಮಾಡಿದ್ದರು. ಆದರೆ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನಾಗಲೀ ಲಾಭಾಂಶ ವನ್ನಾಗಲಿ ವಾಪಾಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News