×
Ad

ಆನ್‌ಲೈನ್ ಟ್ರೇಡಿಂಗ್ ವಂಚನೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

Update: 2024-09-06 20:39 IST

ಉಡುಪಿ, ಸೆ.6: ಆನ್‌ಲೈನ್ ಟ್ರೇಡಿಂಗ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ.

ಕೇರಳ ಕೋಝೀಕ್ಕೋಡ್ ನಿವಾಸಿ ಅಜ್ಮಲ್ ಸುಹೈಲ್ ಸಿ.(19) ಬಂಧಿತ ಆರೋಪಿ. ಪ್ರಕರಣದಲ್ಲಿ ಬ್ಯಾಂಕ್ ಖಾತೆಗೆ ಜಮೆ ಗೊಂಡಿರುವ 80,000ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅಂಬಲಪಾಡಿಯ ಉಪೇಂದ್ರ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಗ್ರೂಪ್ ಸೇರಿಸಿದ್ದು, ವಾಟ್ಸಾಪ್‌ನಲ್ಲಿ ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿದ್ದರು.

ಉಪೇಂದ್ರ ಅವರಿಗೆ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000ರೂ. ಹಣವನ್ನು ಹೂಡಿಕೆ ಮಾಡಿ ಮೋಸ ಮಾಡಿದ್ದರು. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ನಾಲ್ಕು ಮಂದಿ ಆರೋಪಿ ಗಳನ್ನು ಬಂಧಿಸಿ 13,00,00ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆಸಿದ ಉಡುಪಿ ಸೆನ್ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿ ಅಜ್ಮಲ್ ಸುಹೈಲ್ ಕುರಿತು ಮಾಹಿತಿ ಕಲೆ ಹಾಕಿ ಬಂಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News