ಪದ್ಮ ಪ್ರಶಸ್ತಿ: ಅರ್ಜಿ ಆಹ್ವಾನ

Update: 2026-07-17 20:14 IST

ಉಡುಪಿ, ಜು.17: ಪ್ರಸಕ್ತ ಸಾಲಿನ ಗಣರಾಜ್ಯೋತ್ಸವ ಸಂದರ್ಭದಲ್ಲಿ ಘೋಷಿಸಲಾಗುವ ದೇಶದ ಅತ್ಯುನ್ನತ ಪದ್ಮ ಪ್ರಶಸ್ತಿಗಳಿಗೆ ಭಾರತ ಸರ್ಕಾರದ ಎಲ್ಲಾ ಸಚಿವಾಲಯ/ಇಲಾಖೆಗಳಿಂದ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಕ್ಷೇತ್ರ/ವಿಭಾಗಗಳಲ್ಲಿ ವಿಶಿಷ್ಟ ಹಾಗೂ ಅಸಾಧಾರಣ ಸಾಧನೆ/ಸೇವೆಗಾಗಿ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ/ಶಿಫಾರಸ್ಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ - https://awards.gov.in- ಮೂಲಕ ಆನ್‌ಲೈನ್ ನಲ್ಲಿ ಮಾತ್ರ ಸ್ವೀಕರಿಸಲಾಗುವುದು.

ಆದ್ದರಿಂದ ತಮ್ಮ ಜೀವಿತಾವಧಿಯಲ್ಲಿ ಸಾಧನೆ ಮಾಡಿದ ವ್ಯಕ್ತಿಯ ಆಯಾ ಕ್ಷೇತ್ರ/ವಿಭಾಗದಲ್ಲಿ ಅವರ ವಿಶಿಷ್ಟ ಮತ್ತು ಅಸಾಧಾರಣ ಸಾಧನೆ/ಸೇವೆಯನ್ನು ಅಗತ್ಯವಿರುವ ಎಲ್ಲಾ ವಿವರಗಳನ್ನು ಭಾರತ ಸರ್ಕಾರದ ಅಧಿಕೃತ ವೆಬ್‌ಸೈಟ್ -https://awards.gov.in-ನಲ್ಲಿ ಆನ್‌ಲೈನ್ ಮೂಲಕ ಜುಲೈ 31ರೊಳಗಾಗಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News