×
Ad

ಪಡುಕೋಣೆ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2023-08-31 15:23 IST

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಗಂಗೊಳ್ಳಿ ಠಾಣೆ ವ್ಯಾಪ್ತಿಯ ಪಡುಕೋಣೆಯಲ್ಲಿ ಗುರುವಾರ ನಡೆದಿದೆ.

ವಿದ್ಯಾರ್ಥಿನಿಯನ್ನು ಪಡುಕೋಣೆ ನಿವಾಸಿ ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು (16) ಎಂದು ಗುರುತಿಸಲಾಗಿದೆ.

ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು ಸಮೀಪದ ಸರಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್‌.ಸಿ ಓದುತ್ತಿದ್ದ ಈಕೆ ಕಳೆದೆರಡು ದಿನಗಳ ಹಿಂದೆ ಅನಾರೋಗ್ಯವೆಂದು ತನ್ನ ಮನೆಗೆ ಹೋಗಿದ್ದಳು. ಬುಧವಾರ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು ಗುರುವಾರ ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಈ ಮಧ್ಯೆ ಸಿಂಧು ಮನೆಯವರ ಗಮನಕ್ಕೆ ಬಾರದಂತೆ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದು ಕೂಲಂಕುಷ ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ‌ ಕೆ.ಎಂ.ಸಿ ಆಸ್ಪತ್ರೆಗೆ ಪೊಲೀಸರು ಮೃತದೇಹ ರವಾನಿಸಿದ್ದಾರೆ.

ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News