ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ
ಉಡುಪಿ, ಸೆ.25: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆ ಕಾರ್ಯಕ್ರಮ ಇಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಜರಗಿತು.
ಪಂಡಿತ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ದೇಶಕ್ಕಾಗಿ ಸಮರ್ಪಿಸಿಕೊಂಡ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾ ಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯ ದರ್ಶಿ ಉಮೇಶ್ ನಾಯ್ಕ್, ರಮಾಕಾಂತ್ ದೇವಾಡಿಗ, ರಾಜೇಶ್ ಕಾವೇರಿ, ಸತ್ಯಾನಂದ ನಾಯಕ್, ನಳಿನಿ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ವೀಣಾ ಶೆಟ್ಟಿ, ವಿಜಯಕುಮಾರ್ ಉದ್ಯಾವರ, ಕಿರಣ್ ಕುಮಾರ್ ಬೈಲೂರು ಮೊದಲಾದವರು ಉಪಸ್ಥಿತರಿದ್ದರು.