ಆಸಕ್ತಿಯ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಪೋಷಕರ ಪ್ರೋತ್ಸಾಹ ಅಗತ್ಯ: ಪ್ರೊ.ರೇವಣ್‌ಕರ್
ಶಿರ್ವ, ಆ.27: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಕೆಲಸ ಮಾಡಬೇಕು ಮತ್ತು ವಿದ್ಯಾರ್ಥಿ ಗಳು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಪೋಷಕರು ಪ್ರೋತ್ಸಾಹಿಸಬೇಕು ಎಂದು ಕರ್ನಾಟಕ ಉದ್ಯಮ ಶಿಲತಾ ಅಭಿವೃದ್ಧಿ ಕೇಂದ್ರದ ಮತ್ತು ಎನ್‌ಐಟಿಕೆ-ಸ್ಟೆಪ್‌ನ ಮಾಜಿ ನಿರ್ದೇಶಕ ಪ್ರೊ.ಬಿ.ಎಸ್.ರೇವಣ್‌ಕರ್ ಹೇಳಿದ್ದಾರೆ.
ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ರವಿವಾರ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಮಾರ್ಗದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಈ ಸಂದರ್ಭದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾ ಯಿತು. ಅಧ್ಯಕ್ಷತೆಯನ್ನು ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತಿ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮಾತನಾಡಿದರು
ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಪ್ರಥಮ ವರ್ಷದ ಇಂಜಿನಿಯರಿಂಗ್‌ನ ಕಾರ್ಯಕ್ರಮ ಸಂಯೋಜಕ ಡಾ.ರವೀಂದ್ರ ಎಚ್.ಜೆ. ಉಪಸ್ಥಿತರಿದ್ದರು.
ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಲೊಲಿಟ ಪ್ರೀಯ ಕ್ಯಾಸ್ತಲಿನೊ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರವೀಂದ್ರ ಎಚ್.ಜೆ. ವಂದಿಸಿದರು. ವಿದ್ಯಾರ್ಥಿ ಆದಿತ್ಯ ದೇಶ್‌ಪಾಂಡೆ ಪ್ರಾರ್ಥಿಸಿದರು. ಗಣಕ ಯಂತ್ರ ವಿಭಾಗದ ಪ್ರಾಧ್ಯಾಪಕಿ ಸೌಂದರ್ಯ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕ ಸಚಿನ್ ಪ್ರಭು ಕೆ ಕಾರ್ಯಕ್ರಮ ನಿರೂಪಿಸಿದರು.