×
Ad

ಕಾಪು ಮಾರಿಗುಡಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ

Update: 2025-12-24 19:24 IST

ಕಾಪು: ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಬುಧವಾರ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀಮಾರಿಯಮ್ಮ ದೇವಿಯ ದರುಶನ ಪಡೆದರು.

ಈ ಸಂದರ್ಭದಲ್ಲಿ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ದೇವರ ಅನುಗ್ರಹ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ನನಗೆ ಇದು ಜೀವನದಲ್ಲಿ ಅತ್ಯಂತ ಶ್ರೇಷ್ಠವಾದ ದಿನ, ಇಂತಹ ಚರಿತ್ರೆಯುಳ್ಳ ದೇವಸ್ಥಾನಕ್ಕೆ ಬಂದಿರುವುದರಿಂದ ಮಾನಸಿಕ ನೆಮ್ಮದಿಯ ಅನುಭವ ವಾಗಿದೆ. ಎಲ್ಲಿಯೂ ನಡೆಯದ ರೀತಿಯಲ್ಲಿ ಈ ದೇಗುಲದ ಜೀರ್ಣೋದ್ಧಾರ ನಡೆದಿದೆ, ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯ ನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಹುಬ್ಬಳ್ಳಿ ಧಾರವಾಡ ಸಮಿತಿಯ ಸಂಚಾಲಕ ಸುಗ್ಗಿ ಸುಧಾಕರ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ ರಾವ್, ಜಯಲಕ್ಷ್ಮಿ ಎಸ್.ಶೆಟ್ಟಿ, ಚರಿತ ದೇವಾಡಿಗ, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಮತ್ತು ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News