×
Ad

ಡಿ.7ರಂದು ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ

Update: 2025-12-02 21:45 IST

ಪವನ್ ಕಲ್ಯಾಣ್

ಉಡುಪಿ: ಪರ್ಯಾಯ ಪುತ್ತಿಗೆಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರ ನಟ ಹಾಗೂ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿಯೂ ಆಗಿರುವ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ.

ಡಿ.7ರಂದು ಸಂಜೆ 4:00 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಪರಿಸರ, ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಪವನ್ ಕಲ್ಯಾಣ್ ಆಗಮಿಸುವರು ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.

ನ.8ರಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉದ್ಘಾಟನಗೊಂಡ ಬೃಹತ್ ಗೀತೋತ್ಸವ ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆದಿದ್ದು, ವಿಶ್ವ ದಾಖಲೆಗೆ ಪಾತ್ರವಾದ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿರುವುದನ್ನು ಸ್ಮರಿಸಬಹುದು ಎಂದು ಮಠದ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News