ಕಾರ್ಕಳ | ಕಾರು ಢಿಕ್ಕಿ, ಪಾದಾಚಾರಿ ಸಾವು
ಸಾಂದರ್ಭಿಕ ಚಿತ್ರ
ಕಾರ್ಕಳ: ಅತೀವೇಗದಿಂದ ಧಾವಿಸಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ಪಾದಾಚಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಬೆಳ್ಮಣ್‌ನ ಕಾರ್ಕಲ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಅರಣ್ಯ ಇಲಾಖೆಯ ಕಚೇರಿ ಬಳಿ ಬುಧವಾರ ಸಂಜೆ ನಡೆದಿದೆ.
ಮೃತಪಟ್ಟ ಪಾದಾಚಾರಿ ಅವರನ್ನು ಸುರೇಶ್ ಎಂದು ಗುರುತಿಸಲಾಗಿದೆ. ಸಂಜೆ 5ಗಂಟೆ ಸುಮಾರಿಗೆ ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಸುರೇಶ್‌ಗೆ ಕಾರ್ಕಳದ ಕಡೆಯಿಂದ ಪಡುಬಿದ್ರಿಯತ್ತ ವೇಗವಾಗಿ ಧಾವಿಸುತಿದ್ದ ಕಾರು ಹಿಂದಿನಿಂದ ಢಿಕ್ಕಿ ಹೊಡೆದು, ರಸ್ತೆಯ ಬಲಬದಿಗೆ ತಿರುಗಿ ಅಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿತ್ತು.
ಇದರಿಂದ ಗಂಭೀರ ಗಾಯಗೊಂಡ ಸುರೇಶ್ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟರೆ, ಕಾರಿನಲ್ಲಿದ್ದ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳನ್ನು ಕಾರ್ಕಳ ಮತ್ತು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.