×
Ad

ಉಡುಪಿ ಶ್ರೀಕೃಷ್ಣ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನನಗೆ ಗೌರವದ ವಿಷಯ: ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ

Update: 2025-11-27 19:56 IST

ಪ್ರಧಾನಿ ನರೇಂದ್ರ ಮೋದಿ (Photo: PTI)

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ನ.28ರಂದು ಭೇಟಿ ನೀಡುವ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, "ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ" ಎಂದು ಅವರು ತಿಳಿಸಿದ್ದಾರೆ.

ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News