×
Ad

ಕೃತಕ ಬುದ್ಧಿಮತ್ತೆಯಿಂದ ಸಕಾರಾತ್ಮಕ ಬದಲಾವಣೆ ಸಾಧ್ಯ: ಕೆ.ಪಿ.ರಾವ್

Update: 2024-08-19 19:14 IST

ಉಡುಪಿ, ಆ.19: ಕೃತಕ ಬುದ್ಧಿಮತ್ತೆ(ಎಐ) ಆಧುನಿಕ ಜಗತ್ತಿನಲ್ಲಿ ಪ್ರಾಮುಖ್ಯ ಅಂಶವಾಗಿದೆ. ಎಐಯನ್ನು ಸರಿಯಾಗಿ ಬಳಸಿ ಕೊಂಡರೆ ಜಗತ್ತಿನಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಬಹುದು ಎಂದು ಹಿರಿಯ ವಿಜ್ಞಾನಿ ಕೆ.ಪಿ.ರಾವ್ ಹೇಳಿದ್ದಾರೆ.

ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆಯ ಕುರಿತು ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು. ಕೃತಕ ಬುದ್ಧಿಮತ್ತೆ ಇಂದು ಜಗತ್ತಿನಾದ್ಯಂತ ವೇಗವಾಗಿ ಬೆಳೆಯುತ್ತಿದ್ದು, ಅದರ ಸಾಧ್ಯತೆಗಳು ಅಪಾರವಾಗಿವೆ ಹಾಗೂ ಈ ಕ್ಷೇತ್ರಗಳಲ್ಲಿ ಅವಕಾಶಗಳೂ ವಿಪುಲವಾಗಿವೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸನತ್ ಕೋಟ್ಯಾನ್ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News